- Advertisement -
![]()
- Advertisement -
ಸುಳ್ಯ: ಜುಲೈ 26,2022 ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 26 ನೇ ಆರೋಪಿ ರಿಯಾಜ್ ಎಚ್ ವೈ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರವೀಣ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ಐಎ ಒಟ್ಟು 26 ಮಂದಿಯನ್ನು ಬಂಧಿಸಿತ್ತು. ಕೊಡಗು ಸೋಮವಾರಪೇಟೆ ಮೂಲದ ರಿಯಾಜ್ ಈ ಪ್ರಕರಣದ 26 ನೇ ಆರೋಪಿಯಾಗಿದ್ದಾನೆ. ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಎಂಬ ಹಿನ್ನೆಲೆಯಲ್ಲಿ ಈತನ ಬಂಧನವಾಗಿತ್ತು. ಈ ಪ್ರಕರಣ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ಗೆ ಎಚ್ ವೈ ರಿಯಾಜ್ ಆಶ್ರಯ ನೀಡಿದ್ದ ಎನ್ನಲಾಗಿತ್ತು. ಈ ಹಿನ್ನೆಲೆ ಆತನನ್ನು ಬಂಧಿಸಲಾಗಿತ್ತು. ಇದೀಗ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ.
- Advertisement -


