- Advertisement -
![]()
- Advertisement -
ಬೆಂಗಳೂರು: ಕೇಂದ್ರ ಸರ್ಕಾರದಿಂದ ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸುಗಮವಾಗಿ ನಡೆಯುತ್ತಿದ್ದು, ರಾಜ್ಯದಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗಿಲ್ಲ ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸ್ಪಷ್ಟೀಕರಣ ನೀಡಿದೆ.
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ಜಾಲತಾಣಗಳು ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ವದಂತಿಗಳನ್ನು ನಂಬದಂತೆ ಇಲಾಖೆ ಮನವಿ ಮಾಡಿದೆ.
ಇಂಧನವನ್ನು ಕೇವಲ ವಾಹನಗಳ ಟ್ಯಾಂಕ್‌ಗಳಿಗೆ ಮಾತ್ರ ಭರ್ತಿ ಮಾಡಬೇಕು. ಬಾಟಲಿ ಅಥವಾ ಪ್ರತ್ಯೇಕ ಕಂಟೈನರ್‌ಗಳಲ್ಲಿ ಇಂಧನ ನೀಡದಂತೆ ಪೆಟ್ರೋಲ್ ಬಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಅಗತ್ಯಕ್ಕಿಂತ ಹೆಚ್ಚಿನ ಇಂಧನವನ್ನು ಸಂಗ್ರಹಿಸಿ ಆತಂಕ ಸೃಷ್ಟಿಸಬಾರದೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮನವಿ ಮಾಡಿದೆ.
- Advertisement -


