Thursday, June 4, 2026
Homeಕರಾವಳಿದ.ಕ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2-3 ದಿನಗಳ ಕಾಲ ಮಳೆ ಸಾಧ್ಯತೆ; ಭಾರತೀಯ ಹವಾಮಾನ ಇಲಾಖೆಯಿಂದ...

ದ.ಕ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2-3 ದಿನಗಳ ಕಾಲ ಮಳೆ ಸಾಧ್ಯತೆ; ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ

- Advertisement -
- Advertisement -

ಮಂಗಳೂರು: ಮುಂದಿನ ಎರಡು-ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಗಾಳಿ ಒತ್ತಡ ಇರುವುದರಿಂದ ವಿವಿಧೆಡೆ ಗಾಳಿ ಮತ್ತು ಸಿಡಿಲಿನ ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ಮಂಗಳವಾರ 33.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.4 ಡಿ.ಸೆ. ಇಳಿಕೆ ಮತ್ತು 25.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಮಾ. 24ರಂದು ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ದ.ಕ. ಜಿಲ್ಲೆಯಲ್ಲಿ 39 ಡಿ.ಸೆ. ಮತ್ತು ಉಡುಪಿ ಜಿಲ್ಲೆಯಲ್ಲಿ 37.4 ಡಿ.ಸೆ. ತಾಪಮಾನ ದಾಖಲಾಗಿತ್ತು.

- Advertisement -

Latest News

error: Content is protected !!