Saturday, June 6, 2026
Homeಕರಾವಳಿಮಂಗಳೂರುಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಮಂಜೇಶ್ವರದ ಗಣೇಶ್ ಪ್ರಸಾದ್ (41) ಬಂಧಿತ ಆರೋಪಿ.

ಪ್ರಕರಣದ ವಿವರ:
2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ)
ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ದಿನಾಂಕ 27-03-2026 ರಂದು ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತsಗಿರಿ ಮಾಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಬಗ್ಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು .

- Advertisement -

Latest News

error: Content is protected !!