Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕಳೆದ ತಿಂಗಳು ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಕಳೆದ ತಿಂಗಳು ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಳ್ತಂಗಡಿ : ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವರು ಚಿಕಿತ್ಸೆ ಫಲಿಸದೆ ಮಾ.29 ರಂದು ಬೆಳಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36) ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಕಾರಣ ಬಯಲಾಗಬೇಕಿದೆ.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!