ಕಾರ್ಕಳ: ಹಟ್ಟಿಗೆ ನುಗ್ಗಿ ಜಾನುವಾರುಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಯೂನಿಸ್ (31), ಮೊಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು (29) ಮತ್ತು ನಾಸಿರ್ ಅಲಿಯಾಸ್ ಮೊಹಮ್ಮದ್ ನಾಸಿರ್ (28) ಶೌಕತ್ ಅಲಿ ಬಂಧಿತರು.
ಆರೋಪಿಗಳು ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ದಿನಾಂಕ 29.09.2025ರಂದು ರಾತ್ರಿ 2.15 ಗಂಟೆ ಸುಮಾರಿಗೆ ಜಯಶ್ರೀ ಪೂಜಾರಿಯವರ ಮನೆಯ ಹಟ್ಟಿಗೆ ನುಗ್ಗಿ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದರು. ಈ ವೇಳೆ ಎಚ್ಚರಗೊಂಡು ಬಂದ ಜಯಶ್ರೀ ಪೂಜಾರಿಯವರಿಗೆ ಆರೋಪಿಗಳು ತಲವಾರು ತೋರಿಸಿ ಬೆದರಿಕೆ ಹಾಕಿ, ಹಟ್ಟಿಯಲ್ಲಿದ್ದ ಮೂರು ಜಾನುವಾರುಗಳ ಹಗ್ಗಗಳನ್ನು ಕತ್ತರಿಸಿ ವಾಹನದಲ್ಲಿ ತುಂಬಿಸಿಕೊಂಡು ಕಳವು ಮಾಡಿಕೊಂಡು ಹೋಗಿ ವಧೆ ಮಾಡಿರುವುದು ತಿಳಿದುಬಂದಿದೆ. ಕಳವುಗೊಂಡ ಜಾನುವಾರುಗಳ ಒಟ್ಟು ಮೌಲ್ಯ ರೂ.35,000 ಆಗಿದೆ. ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ತನಿಖೆ ನಡೆಸಿದ ಕಾರ್ಕಳ ವೃತ್ತದ ಸಿಪಿಐ ಅವರು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಅವರು ಜಾಮೀನು ಪಡೆದು ಬಿಡುಗಡೆಗೊಂಡಿದ್ದರು.


