Thursday, June 4, 2026
Homeಕರಾವಳಿಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ತನ್ನ ಕೃತ್ಯ ಒಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್; ಏಪ್ರಿಲ್...

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ತನ್ನ ಕೃತ್ಯ ಒಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್; ಏಪ್ರಿಲ್ 10ರಂದು ಶಿಕ್ಷೆಯ ಪ್ರಮಾಣ ಪ್ರಕಟ

- Advertisement -
- Advertisement -

ಮಂಗಳೂರು; 2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದು, ಏಪ್ರಿಲ್ 10ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.

ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯಕ್ಕೆ ಆತ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು, ಏಪ್ರಿಲ್ 10ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಇನ್ನು ಈ ಪ್ರಕರಣದ ತನಿಖೆಯ ಆರಂಭದಲ್ಲಿ ತಾನು ನಿರಾಪರಾಧಿ ಎಂದು ವಾದಿಸಿದ್ದ ಶಾರೀಕ್, ನಂತರ 2025ರ ಡಿಸೆಂಬರ್‌ನಲ್ಲಿ ತನ್ನ ವಕೀಲರ ಮೂಲಕ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದನು. “ಕುಕ್ಕರ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನಗಳನ್ನು ಇಟ್ಟು ಸ್ಫೋಟ ನಡೆಸಿದ್ದು ಸತ್ಯ” ಎಂದು ಆತ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.

ಕುಕ್ಕರ್ ಬಾಂಬ್ ಸ್ಪೋಟದ ತನಿಖೆ ಎನ್‌ಐಎ ತನಿಖೆ ಕೈಗೆತ್ತಿಕೊಂಡಿತ್ತು. 2024ರಲ್ಲಿ ಶಾರೀಕ್ ಮತ್ತು ಸೈಯದ್ ಯಾಸೀನ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದೀಗ ಆರೋಪಿಯು ತನಿಖಾಧಿಕಾರಿಗಳು ಹೊರಿಸಿರುವ ಎಲ್ಲಾ ಆರೋಪಗಳು ಸತ್ಯವೆಂದು ಒಪ್ಪಿಕೊಂಡಿರುವುದರಿಂದ, ನ್ಯಾಯಾಲಯವು ಮೂರು ತಿಂಗಳ ಸುದೀರ್ಘ ವಿಚಾರಣೆಯ ನಂತರ ಅರ್ಜಿಯನ್ನು ಪುರಸ್ಕರಿಸಿದೆ. ಏಪ್ರಿಲ್ 10ರಂದು ಈತನಿಗೆ ಕಠಿಣ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ.

- Advertisement -

Latest News

error: Content is protected !!