Saturday, June 6, 2026
Homeತಾಜಾ ಸುದ್ದಿಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾರಿ ಅಗ್ನಿ ಅವಘಡ!

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾರಿ ಅಗ್ನಿ ಅವಘಡ!

- Advertisement -
- Advertisement -

ಬೆಂಗಳೂರಿನ ಹಬ್ ಎಂದೇ ಕರೆಯಲ್ಪಡುವ ಎಲೆಕ್ಟ್ರಾನಿಕ್ ಸಿಟಿ ಹಂತ 1 ರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಹೊತ್ತು ಸ್ಥಳಿಯರಲ್ಲಿ ಆತಂಕದ ವಾತಾವರಣ ಮೂಡಿತ್ತು.

ಅಗ್ನಿ ಅವಘಡದ ತೀವ್ರತೆಗೆ ಇಡೀ ಪ್ರದೇಶವೇ ದಟ್ಟವಾದ ಕಪ್ಪು ಹೊಗೆಯಿಂದ ಆವೃತವಾಗಿದೆ.

ಬೆಂಕಿಯ ಜ್ವಾಲೆಗಳು ಎತ್ತರಕ್ಕೆ ಚಿಮ್ಮುತ್ತಿದ್ದು, ಸುತ್ತಮುತ್ತಲಿನ ಕಟ್ಟಡಗಳಿಗೂ ಹರಡುವ ಭೀತಿ ಮೂಡಿದೆ. ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಈ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ, ಇದುವರೆಗೂ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!