Friday, June 5, 2026
Homeತಾಜಾ ಸುದ್ದಿನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

- Advertisement -
- Advertisement -

ಬೆಂಗಳೂರು: ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಮತ್ತು ಸಹಕಾರ ಇಲಾಖೆ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ನಾಳೆ ರಾತ್ರಿ 9 ಗಂಟೆಗೆ ಅಸ್ಸಾಂ ನಿಂದ ಚುನಾವಣಾ ಪ್ರಚಾರ ಮುಗಿಸಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ, ನಾಳೆ ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಶನಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ನಗರೂರಿನಲ್ಲಿ ನಡೆಯುವ ಹಿಂದೂ ಧರ್ಮ ಆಚಾರ್ಯ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ನಗರೂರಿನ ಬಿಜಿಎಸ್ ವಿಜ್ಞಾಥಂ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡಾ ಪಾಲ್ಗೊಳ್ಳಲಿದ್ದಾರೆ.

ಶನಿವಾರ ಬೆಳಗ್ಗಿನಿಂದ ಸಂಜೆಯವರೆಗೂ ಹಿಂದೂ ಧರ್ಮ ಆಚಾರ್ಯ ಸಭೆಯಲ್ಲಿ ಭಾಗಿಯಾಗಲಿರುವ ಅಮಿತ್ ಶಾ ಬಳಿಕ ಬೆಂಗಳೂರಿನಿಂದ ನವದೆಹಲಿಗೆ ನಿರ್ಗಮಿಸಲಿದ್ದಾರೆ.

- Advertisement -

Latest News

error: Content is protected !!