Saturday, June 6, 2026
Homeಕರಾವಳಿಮಂಗಳೂರುಬಂಟ್ವಾಳ:  ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಬೊಲೆರೊ ಪಿಕಪ್ ವಾಹನ ಡಿಕ್ಕಿ:ಸೈಕಲ್ ಸವಾರ ಸಾವು

ಬಂಟ್ವಾಳ:  ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಬೊಲೆರೊ ಪಿಕಪ್ ವಾಹನ ಡಿಕ್ಕಿ:ಸೈಕಲ್ ಸವಾರ ಸಾವು

- Advertisement -
- Advertisement -

ಬಂಟ್ವಾಳ:  ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಬೊಲೆರೊ ಪಿಕಪ್ ವಾಹನ ಡಿಕ್ಕಿಯಾದ ಪರಿಣಾಮ ಸೈಕಲ್ ಸವಾರ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೈಕಂಬ ಸಮೀಪದ ಶಾಂತಿ ಅಂಗಡಿ ಎಂಬಲ್ಲಿ ನಡೆದಿದೆ.

ಶಾಂತಿ ಅಂಗಡಿ ನಿವಾಸಿ ಗಾಡ್ವಿನ್ ಪಿಂಟೊ (49) ಮೃತ ದುರ್ದೈವಿ. ಇವರು ಬಿ.ಸಿ.ರೋಡ್‌ನ ತಲಪಾಡಿಯಲ್ಲಿ ವಾಹನ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಗೋಡ್ವಿನ್ ಪಿಂಟೊ ರವರು ಸೈಕಲ್  ನಲ್ಲಿ ಮಂಗಳೂರು ಕಡೆಯಿಂದ ಬಿ ಸಿ ರೋಡ್ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಏಕಮುಖ ರಸ್ತೆಯ ಅಂಚಿಗೆ ತಲುಪಿದಾಗ  ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಬೊಲೆರೊ ಪಿಕಪ್ ವಾಹನವು ರಸ್ತೆ ಬದಿಯಲ್ಲಿದ್ದ ಗಾಡ್ವಿನ್ ಅವರಿಗೆ ಬಲವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಾಡ್ವಿನ್ ಅವರು ರಸ್ತೆಗೆ ಎಸೆಯಲ್ಪಟ್ಟು  ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಚಾಲಕನ ವಿರುದ್ಧ ಅಜಾಗರೂಕ ಚಾಲನೆಯಡಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!