Thursday, June 4, 2026
Homeಕರಾವಳಿಮಂಗಳೂರುವಿಟ್ಲ; ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸಿ ಮಹಿಳೆಗೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

ವಿಟ್ಲ; ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸಿ ಮಹಿಳೆಗೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

- Advertisement -
- Advertisement -

ವಿಟ್ಲ; ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸಿ ಮಹಿಳೆಗೆ ಡಿಕ್ಕಿಯಾದ ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೇಪು ಗ್ರಾಮದ ಕುದ್ದುಪದವು ಚೆಲ್ಯಡ್ಕ ನಿವಾಸಿ ಈಶ್ವರ ನಾಯ್ಕ ಎಂಬವರ ಪತ್ನಿ ಸುಶೀಲ (50) ಗಾಯಗೊಂಡವರು.

ವಿಟ್ಲ-ಮುಡಿಪು- ಸ್ಟೇಟ್ ಬ್ಯಾಂಕ್ ಮಾರ್ಗದಲ್ಲಿ ಸಂಚರಿಸುವ ಬಸ್ , ನಿಲ್ದಾಣದಲ್ಲಿ ನಿಲುಗಡೆಗಾಗಿ ಹಿಂದಕ್ಕೆ ಬರುತ್ತಿದ್ದಾಗ ಅಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಮಹಿಳೆ ಬಸ್ ನ ಅಡಿಗೆ ಬೀಳುತ್ತಿದ್ದಂತೆ ಅಲ್ಲಿದ್ದವರು ಕಿರುಚಾಡಿದ್ದಾರೆ. ಹಾಗಾಗಿ ಆಗಬಹುದಾದ ದೊಡ್ಡ ಅನಾಹುತ ತಪ್ಪಿದೆ.

ಸುಶೀಲ ಅವರು ಅನಾರೋಗ್ಯದ ಹಿನ್ನೆಲೆ ವಿಟ್ಲದ ಸುರಕ್ಷಾ ಆಸ್ಪತ್ರೆಗೆ ತೆರಳಲು ಬಸ್ ನಿಲ್ದಾಣಕ್ಕೆ ಬಂದಿದ್ದರು ಎನ್ನಲಾಗಿದೆ. ಗಾಯಾಳುವಿನ ಹಣೆಯ ಭಾಗಕ್ಕೆ ಮತ್ತು ಕೈಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ವಿಟ್ಲ ಸರ್ಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತು. ತಲೆಗೆ ಪೆಟ್ಟು ಬಿದ್ದಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚಿಸಿದ್ದಾರೆ.

- Advertisement -

Latest News

error: Content is protected !!