Saturday, June 6, 2026
Homeಕರಾವಳಿಮಂಗಳೂರುವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ನೆಕ್ಕರೆಕಾಡು ನಿವಾಸಿ ರಮೇಶ್ (38) ಮೃತಪಟ್ಟ ವ್ಯಕ್ತಿ.

 ರಮೇಶ್ ವೃತ್ತಿಯಲ್ಲಿ ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಇವರು ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.

ವಿಷಯ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!