- Advertisement -
![]()
- Advertisement -
ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಸ್ವಸ್ಥರಾಗಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕುಸಿದು ಬಿದ್ದ ಘಟನೆ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ ಭಾಗಿಯಾಗಿದ್ದರು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲದೇ ಇಲ್ಲ ಸ್ಪೀಕರ್ ಯು ಟಿ ಖಾದರ್ ಅವರು ಅವರದೇ ಕಾರಿನಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಗ್ಡೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶುಗರ್ ಲೆವೆಲ್ ಕಡಿಮೆಯಾದ ಹಿನ್ನೆಲೆ ಅಸ್ವಸ್ಥಗೊಂಡಿದ್ದರು ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಕೆಲವೇ ಹೊತ್ತಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದಿದ್ದಾರೆ.
- Advertisement -


