Thursday, June 4, 2026
Homeಕರಾವಳಿಉಡುಪಿಗಡಿಪಾರು ಆದೇಶದ ಬಳಿಕ ಪೊಲೀಸರನ್ನ ಯಾಮಾರಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ; ಕಾರಿನಲ್ಲಿದ್ದ ಗಾಂಜಾ ಸಹಿತ ಮತ್ತೊಬ್ಬ...

ಗಡಿಪಾರು ಆದೇಶದ ಬಳಿಕ ಪೊಲೀಸರನ್ನ ಯಾಮಾರಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ; ಕಾರಿನಲ್ಲಿದ್ದ ಗಾಂಜಾ ಸಹಿತ ಮತ್ತೊಬ್ಬ ಆರೋಪಿಯು ಪೊಲೀಸ್‌ ವಶಕ್ಕೆ

- Advertisement -
- Advertisement -

ಉಡುಪಿ: ಫೈಝಲ್ ಎಂಬ ಆರೋಪಿಯನ್ನು ಗಡಿ ಪಾರು ಮಾಡುವಂತೆ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾಪೊಲೀಸ್ ಅಧೀಕ್ಷಕರ ಆದೇಶ ಹೊರಡಿಸಿದ್ದು, ಆದೇಶದ ಪ್ರತಿ ಜಾರಿ ಮಾಡಲು ಬಂದ ಪೊಲೀಸರನ್ನು ಯಾಮಾರಿಸಿ ಆರೋಪಿಯು ಓಡಿ ಹೋಗಿದ್ದು, ಇದೀಗ ಆರೋಪಿಯನ್ನು ಕಾರ್ಕಳ ನಗರ ಠಾಣೆಯ
ಪೊಲೀಸರು ಬಂಧಿಸಿದ್ದಾರೆ.

ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಾರ್ಕಳದ ಬಂಗ್ಲಗುಡ್ಡೆ ಕಸಬ ನಿವಾಸಿ ಫೈಝಲ್‌ನ್ನು ಕಾರ್ಕಳ ಪೊಲೀಸ್ ಉಪನಿರೀಕ್ಷಕರು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

ಘಟನೆಯ ವಿವರ: ಪೊಲೀಸರು ಪಡುತೋನ್ಸೆ ಗ್ರಾಮದ ಹೂಡೆ ನಾಗಬ್ರಹ್ಮ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಆರೋಪಿ ಇರುವುದನ್ನು ಖಚಿತಪಡಿಸಿಕೊಂಡು ಹೋದಾಗ, ಆರೋಪಿ ತಾನು ಕುಳಿತಿದ್ದ ಕಾರನ್ನು ಒಮ್ಮೆಗೆ ಹಿಮ್ಮುಖವಾಗಿ ಚಲಾಯಿಸಿ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಕ್ಕೆ ಢಿಕ್ಕಿ ಹೊಡೆದು ಓಡಿ ಹೋಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಈ ಘಟನೆಯಿಂದ ಕಾರು ಜಖಂಗೊಂಡಿದ್ದು, ಆತನ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಆತ ಬಿಟ್ಟು ಹೋದ ಕಾರಿನ ಮಹಜರು ಪ್ರಕ್ರಿಯೆ ನಡೆಸುವಾಗ ಅದರಲ್ಲಿ ಮಾದಕ ವಸ್ತು ಗಾಂಜಾ 173.42 ಗ್ರಾಂ (ಮೌಲ್ಯ ಅಂದಾಜು 8,000ರೂ.) ಪತ್ತೆಯಾಗಿತ್ತು ಎಂದು ತಿಳಿದು ಬಂದಿದೆ.

ಅಷ್ಟೇಅಲ್ಲದೆ ಘಟನೆಯ ಸಂದರ್ಭದಲ್ಲಿ ದೊರೆತ ಎರಡು ಮೊಬೈಲ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿತ್ತು. ಆರೋಪಿ ಫೈಝಲ್ ಮತ್ತೊಬ್ಬ ಆರೋಪಿ ಯೊಂದಿಗೆ ಸೇರಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಇಟ್ಟು ಕೊಂಡು ಮಾರಾಟ ಮಾಡಲು ಕಾಯುತ್ತಿದ್ದುದಾಗಿ ತಿಳಿದುಬಂದಿತ್ತು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!