Wednesday, October 14, 2026
HomeUncategorizedಉಡುಪಿ: ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ; ಪವಾಡ ಸದೃಶ ಪಾರಾದ ನಾಲ್ವರು ಪ್ರಯಾಣಿಕರು

ಉಡುಪಿ: ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ; ಪವಾಡ ಸದೃಶ ಪಾರಾದ ನಾಲ್ವರು ಪ್ರಯಾಣಿಕರು

- Advertisement -
- Advertisement -

ಉಡುಪಿ: ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಪವಾಡ ಸದೃಶ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ಸಮೀಪ ನಡೆದಿದೆ.


ಕೇರಳ ಮೂಲದ ದಂತ ವೈದ್ಯೆ ಗ್ರೀಷ್ಮಾ ಮತ್ತು ಅವರ ಕುಟುಂಬದವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ ವಾಪಸಾಗುತ್ತಿದ್ದರು. ಈ ವೇಳೆ ಮುಂಬೈನಿಂದ ಪಡುಬಿದ್ರಿಗೆ ಸರಕು ಸಾಗಿಸುತ್ತಿದ್ದ ಲಾರಿಯು ಹಂಗಳೂರು ಬಳಿ ವೇಗವಾಗಿ ಬಂದು ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಕಾರು ಜಖಂಗೊಂಡಿದ್ದು, ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.


ಕುಂದಾಪುರ ಸಂಚಾರ ಠಾಣಾ ಎಸ್‌ಐ ಅನೂಪ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!