ಬಂಟ್ವಾಳ: ದಿನಾಂಕ:10.11.2020 ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಮೇಲ್ಕಾರ್ ಬಸ್ ನಿಲ್ಲಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಆಗಿನ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ರವರು ದಾಳಿ ನಡೆಸಿ ರೂ 49,000/- ಮೌಲ್ಯದ 1.480 ಕಿ.ಗ್ರಾಂ ಗಾಂಜಾ ಹಾಗೂ ಇಬ್ಬರು ಆರೋಪಿಗಳನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಠಾಣೆಯಲ್ಲಿ ಅಕ್ರ 126/2020ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆಗಿನ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ ಡಿ ನಾಗರಾಜ್ ರವರು ತನಿಖೆ ಪೂರ್ಣಗೊಳಿಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿ ಮಂಗಳೂರು ಬಂದರು ನಿವಾಸಿ ಟಿ.ಪಿ ಫಾರೂಕ್ (50) ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ರವರು ದಿನಾಂಕ: 4-4-2026 ರಂದು 7 ವರ್ಷ ಶಿಕ್ಷೆ ಮತ್ತು 70,000 ಸಾವಿರ ದಂಡ ವಿಧಿಸಿರುತ್ತಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಶ್ರೀಮತಿ ಜೂಡಿತಾರವರು ಸಮರ್ಥವಾಗಿ ವಾದ ಮಂಡಿಸಿರುತ್ತಾರೆ.


