ಉಡುಪಿ: ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರದಂದು ಬ್ರಹ್ಮಕಲಶೋತ್ಸವ ನೇರವೇರಿದ್ದು, ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಬ್ರಹ್ಮಕುಂಭಾಭಿಷೇಕ ನೆರವೇರಿಸಲಾಯಿತು.
ಬೆಳಿಗ್ಗೆ ಗಣಹೋಮ, ಪ್ರಧಾನ ಕಲಾ ಸಾನಿಧ್ಯ ಹೋಮ, 1001 ಕಲಶಾರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ, ಪಲ್ಲ ಪೂಜೆ ಜರುಗಿತು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.
ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಭೂಪತಿ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ, ಇಂದ್ರಾಣಿ ಶ್ರೀಪಂಚ ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ಕುಶಲ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರತ್ನಾಕರ್ ಇಂದ್ರಾಳಿ, ಕೋಶಾಧಿಕಾರಿ ರತ್ನಾಕರ್ ಶೆಟ್ಟಿ ಬುಡ್ಡಾರು, ಬ್ರಹ್ಮ ಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೀತಾರಾಮ ನಾಯಕ್ ಮಂಚಿ ಕೋಡಿ, ಮಂಚಿ ಪ್ರಭಾಕರ್ ಶೆಟ್ಟಿ, ಇಂದ್ರಾಳಿ ಗೋಪಾಲಕೃಷ್ಣ ಭಟ್, ಶೇಖರ್ ಶೆಟ್ಟಿ ಗೋಪಾಲ ಪೂಜಾರಿ, ಅನಂತ ನಾಯ್ಕ್ ಇಂದ್ರಾಳಿ ಸಹಿತ ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.


