- Advertisement -
![]()
- Advertisement -
ಬೆಳ್ತಂಗಡಿ: ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏಪ್ರಿಲ್ 7 ರಂದು ನಡೆದಿದೆ. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ನಿವಾಸಿ ಮಹಾಲಿಂಗಂ(53) ಮೃತರು. ಮಹಾಲಿಂಗಂ ಉಪ್ಪಿನಂಗಡಿಯಿಂದ ಪಿಿಲಗೂಡು ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಮಹಾಲಿಂಗಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮೃತರ ಪುತ್ರ ಸುದೀನ್ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -


