- Advertisement -
![]()
- Advertisement -
ಸುಳ್ಯ : ದಿನಾಂಕ 30.03.2026 ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್ ಸಲ್ಮಾನ್ (35) ಬಂಧಿತ. ಆರೋಪಿಯಿಂದ ಕಳವು ಮಾಡಿದ 2000 ರೂ ನಗದು ಹಣವನ್ನು ಸ್ವಾದೀನಪಡಿಸಿಕೊಂಡು, ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
- Advertisement -


