ಉಡುಪಿ: ನೇಣು ಬಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಭೂಸಕ್ರಡಿ ಹಾಲಂಬೇರು ಪ್ರದೇಶದಲ್ಲಿ ನಡೆದಿದೆ.
ಭಾಗ್ಯಶ್ರೀ ಗಾಣಿಗ (23) ಮೃತ ಯುವತಿ. ಭಾಗ್ಯಶ್ರೀ ತಮ್ಮ ಮನೆಯಲ್ಲಿ ಕೋಣೆಯ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುಡ್ಡೇಅಂಗಡಿಯ ಇಂಟರ್‌ಲಾಕ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಭಾಗ್ಯಶ್ರೀ ಅವರು ಏಪ್ರಿಲ್ 3ರಂದು ರಾತ್ರಿ 10 ಗಂಟೆಗೆ ಮನೆಯವರೊಂದಿಗೆ ಊಟ ಮುಗಿಸಿ ಮೇಲ್ಮಹಡಿಯ ತಮ್ಮ ಕೋಣೆಗೆ ಮಲಗಲು ತೆರಳಿದ್ದರು. ಸುಮಾರು 10.15ರ ಸುಮಾರಿಗೆ ಅಕ್ಕ ಜಯಶ್ರೀ ಅವರು ಹಾಲು ನೀಡಲು ಕೋಣೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರನ್ನು ಕೆಳಗಿಳಿಸಿ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರ ಅಕ್ಕ ಜಯಶ್ರೀ ನೀಡಿದ ದೂರಿನ ಮೇರೆಗೆ ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


