Friday, June 5, 2026
Homeತಾಜಾ ಸುದ್ದಿಪೊಲೀಸ್ ಸಿಬ್ಬಂದಿಗೆ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿದ ಪಿಎಸ್ಐ

ಪೊಲೀಸ್ ಸಿಬ್ಬಂದಿಗೆ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿದ ಪಿಎಸ್ಐ

- Advertisement -
- Advertisement -

ಚಿತ್ರದುರ್ಗ: ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಪಿಎಸ್ ಐ ಪೊಲೀಸ್ ಸಿಬ್ಬಂದಿಗೆ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಠಾಣೆಯಲ್ಲಿ ಈ ಘಟನೆ ನಡೆದಿದ್ದು ಪಿಎಸ್ಐ ನೇತ್ರಾವತಿ ಪೊಲೀಸ್ ಸಿಬ್ಬಂದಿಗೆ ಬಿಸಿಲಿನಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ್ದಾರೆ.

ಠಾಣೆಯ ಎಎಸ್ಐ ಸೇರಿದಂತೆ ಹನ್ನೆರಡು ಸಿಬ್ಬಂದಿಗೆ ಮದ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ನೀಡಲಾಗಿದೆ.

ಬಿರು ಬಿಸಿಲಿನಲ್ಲಿ ಶಿಕ್ಷೆ ಅನುಭವಿಸಿದ ಕಾರಣ ಪೊಲೀಸ್ ಸಿಬ್ಬಂದಿ ಆರೋಗ್ಯದಲ್ಲಿ ಏರು ಪೇರು ಉಂಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ಘಟನೆ ಪೊಲೀಸ್ ಉನ್ನತ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡಲು ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು ಆದೇಶಿಸಿದ್ದಾರೆ.

- Advertisement -

Latest News

error: Content is protected !!