- Advertisement -
![]()
- Advertisement -
ಕಟಪಾಡಿ : ಕಾಮಗಾರಿಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಜಂಟಿಯಾಗಿ ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ರಾ. ಹೆ. ಅಂಡರ್‌ಪಾಸ್ ಮತ್ತು ವೆಹಿಕಲ್ ಓವರ್‌ಪಾಸ್ ನಿರ್ಮಾಣವನ್ನು ಪರಿಶೀಲಿಸಿದರು.
ಕುಂದಾಪುರ ಮಂಗಳೂರು ಮಾರ್ಗದ ರಾ. ಹೆ. ಅಂಡರ್‌ಪಾಸ್ ಕಾಮಗಾರಿ ಪೂರ್ಣಗೊಂಡಿದ್ದು, ಎ. 10 ರಂದು ಬೆಳಗ್ಗೆ 10.30ಕ್ಕೆ ವಾಹನಗಳ ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ. ಬಳಿಕ ಮೇಲ್ಲೇತುವೆ ಕಾಮಗಾರಿ ಮುಂದುವರಿಯಲಿದೆ ಎಂದು ಸಂಸದ ಕೋಟ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರರು ಕಟಪಾಡಿ ಪಂಚಾಯತ್ ಮಾಜಿ ಸದಸ್ಯರು ಉಪಸ್ಥಿತರಿದ್ದರು.
- Advertisement -


