Thursday, June 4, 2026
HomeWorldಲೆಬನಾನ್‌ ಮೇಲೆ ಇಸ್ರೇಲ್ ವಾಯುಪಡೆ ದಾಳಿ: ಪ್ರತೀಕಾರವಾಗಿ ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ಲೆಬನಾನ್‌ ಮೇಲೆ ಇಸ್ರೇಲ್ ವಾಯುಪಡೆ ದಾಳಿ: ಪ್ರತೀಕಾರವಾಗಿ ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್

- Advertisement -
- Advertisement -

ಲೆಬನಾನ್‌ ಮೇಲೆ ಕೇವಲ 10 ನಿಮಿಷಗಳಲ್ಲಿ ಇಸ್ರೇಲ್‌ ವಾಯುಪಡೆ 100 ಕ್ಷಿಪಣಿ ದಾಳಿ ನಡೆಸಿದ್ದು, ಇದೀಗ ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಇರಾನ್‌, ಹೊರ್ಮುಜ್ ಜಲಸಂಧಿಯನ್ನು ಮುಚ್ಚಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿವುದು ವಿಶೇಷ. ಈ ದಾಳಿಯನ್ನು ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ ಲೆಬನಾನ್‌ನ ಹಿಜ್ಬುಲ್ಲಾ ಕಮಾಂಡ್ ಕೇಂದ್ರಗಳು ಹಾಗೂ ಶಸ್ತ್ರಾಸ್ತ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ. ಲೆಬನಾನ್ ಆರೋಗ್ಯ ಸಚಿವಾಲಯದ ವರದಿ ಪ್ರಕಾರ ಈ ಭೀಕರ ದಾಳಿಯಲ್ಲಿ ಕನಿಷ್ಠ 254 ಜನರು ಸಾವನ್ನಪ್ಪಿದ್ದಾರೆ ಮತ್ತು 800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇನ್ನು ಇಸ್ರೇಲ್ ಪ್ರಧಾನಿ ನೆತನ್ಯಾಹು ಲೆಬನಾನ್ ಮೇಲಿನ ಕಾರ್ಯಾಚರಣೆಗೆ ಈ ಕದನ ವಿರಾಮ ಅನ್ವಯಿಸುವುದಿಲ್ಲ ಎಂದು   ಸ್ಪಷ್ಟಪಡಿಸಿದ್ದಾರೆ. ಇಸ್ರೇಲ್‌ನ ದಾಳಿಗಳಿಗೆ ಪ್ರತಿಯಾಗಿ ಹಿಜ್ಬುಲ್ಲಾ ಉಗ್ರ ಸಂಘಟನೆ ಕೂಡ ಉತ್ತರ ಇಸ್ರೇಲ್‌ನ ಸೇನಾ ನೆಲೆಗಳು ಮತ್ತು ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ.

ಈ ಸಂಘರ್ಷದಿಂದಾಗಿ ಲೆಬನಾನ್‌ನಲ್ಲಿ ಈವರೆಗೆ 1,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!