Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು: ಮಗ ಬೆಂಗಳೂರಿನಲ್ಲಿ , ಮಗಳು ದುಬೈನಲ್ಲಿ; ಸಾವನ್ನಪ್ಪಿದ ತಂದೆಯ ಮೃತದೇಹ ಜೊತೆ 10 ದಿನಗಳನ್ನು...

ಚಿಕ್ಕಮಗಳೂರು: ಮಗ ಬೆಂಗಳೂರಿನಲ್ಲಿ , ಮಗಳು ದುಬೈನಲ್ಲಿ; ಸಾವನ್ನಪ್ಪಿದ ತಂದೆಯ ಮೃತದೇಹ ಜೊತೆ 10 ದಿನಗಳನ್ನು ಕಳೆದ ಮಾನಸಿಕ ಅಸ್ವಸ್ಥ ತಾಯಿ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಮನಕಲುಕುವ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಪತಿ ಮೃತಪಟ್ಟು 10 ದಿನಗಳ ಕಾಲ ಕಳೆದಿದ್ದರು ಶವದ ಪಕ್ಕದಲ್ಲೇ ಮಾನಸಿಕ ಅಸ್ವಸ್ಥ ಪತ್ನಿ ಕಾಲ ಕಳೆದ ಘಟನೆ ನಡೆದಿದೆ.

77 ವರ್ಷದ ಸಿರಿಲ್ ಮೋನಿಸ್ ಅವರ ಗ ಬೆಂಗಳೂರಿನಲ್ಲಿ  ಉದ್ಯೋಗದಲ್ಲಿದ್ದು ಮಗಳು ದುಬೈನಲ್ಲಿ ಶಿಕ್ಷಕಿಯಾಗಿದ್ದಾರೆ. ಇನ್ನು ಸಿರಿಲ್ ಮೋನಿಸ್ ಮಾನಸಿಕ ಅಸ್ವಸ್ಥ ಪತ್ನಿ ಜೊತೆ ವಾಸವಿದ್ದರು. 10 ದಿನಗಳ ಹಿಂದೆ  ಸಿರಿಲ್ ಮೋನಿಸ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.  ಆದರೆ, ಅವರ ಪತ್ನಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಪತಿ ಸಾವನ್ನಪ್ಪಿರುವುದು ಅವರಿಗೆ ತಿಳಿದಿರಲೇ ಇಲ್ಲ. ಸುಮಾರು 10 ದಿನಗಳ ಕಾಲ ಅವರು ಕೊಳೆತು ಹುಳ ಹಿಡಿದಿದ್ದ ಪತಿಯ ಶವದ ಪಕ್ಕದಲ್ಲೇ ಕಾಲ ಕಳೆದಿದ್ದಾರೆ. ಮನೆಯಿಂದ ವಿಪರೀತ ದುರ್ವಾಸನೆ ಬಂದಾಗ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದಾಗ ಪತ್ನಿ “ನನ್ನ ಗಂಡ ನನಗೆ ಬೇಕು, ಯಾರೂ ಮುಟ್ಟಬೇಡಿ” ಎಂದು ಶವವನ್ನು ಮುಟ್ಟಲು ಬಿಡದೆ ಹಠ ಹಿಡಿದಿದ್ದರು. ಮಗ ನಿತ್ಯ ಕರೆ ಮಾಡಿದಾಗಲೂ ತಾಯಿ “ಅಪ್ಪ ಚೆನ್ನಾಗಿದ್ದಾರೆ” ಎಂದೇ ಹೇಳುತ್ತಿದ್ದರು. ಅಪ್ಪ ಸತ್ತ 10 ದಿನಗಳ ನಂತರ ಮಗ ಬಂದರೂ, ತಂದೆಯ ಮುಖ ನೋಡುವ ಭಾಗ್ಯ ಆತನಿಗೆ ಸಿಗಲಿಲ್ಲ. ಇನ್ನು ಮಗಳು ಅಪ್ಪ ಸತ್ತರೂ ಬಂದು ನೋಡಿಲ್ಲ.

ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸ್ಥಳೀಯರು ಮುಟ್ಟಲು ಹಿಂಜರಿದರು. ಈ ವೇಳೆ ಸಮಾಜ ಸೇವಕ ಆರೀಫ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿ, ಅಂತ್ಯಸಂಸ್ಕಾರಕ್ಕೆ ನೆರವಾದರು. ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಸಂಜೆ ವೇಳೆಗೆ ಮೋನಿಸ್ ಅವರ ಅಂತ್ಯಸಂಸ್ಕಾರ ನೆರವೇರಿತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Latest News

error: Content is protected !!