Monday, June 8, 2026
Homeಕರಾವಳಿಮಂಗಳೂರು ಮಂಗಳೂರು; ಗಂಜಿಮಠದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ: ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ನ...

 ಮಂಗಳೂರು; ಗಂಜಿಮಠದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ: ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ನ ಮಾಲೀಕರು ಮತ್ತು ಆಯೋಜಕರ ಮೇಲೆ ಪ್ರಕರಣ ದಾಖಲು.

- Advertisement -
- Advertisement -

ಮಂಗಳೂರು; ದಿನಾಂಕ 12-04-2026 ರಂದು ಮಧ್ಯಾಹ್ನ 12 ಗಂಟೆಯಿಂದ 2-00 ಗಂಟೆಯ  ಮಧ್ಯೆ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ನ ಮಾಲಿಕರು  ಮದುವೆಗೆ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳದೆ ಮದುವೆ ಕಾರ್ಯಕ್ರಮಕ್ಕೆ ಹಾಲ್ ನ್ನು ಬಾಡಿಗೆ ನೀಡಿ ರಾಷ್ಟ್ರೀಯ ಹೆದ್ದಾರಿ 169 ನೇಯದರ ಮೇಲೆ ವಾಹನಗಳನ್ನು ಪಾರ್ಕಿಂಗ್ ಮಾಡಿಸಿ ಟ್ರಾಫಿಕ್ ಜ್ಯಾಮ್ ಆಗಲು ಕಾರಣಕರ್ತರಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಕ್ರಮವಾಗಿ ಅಡ್ಡಿಪಡಿಸಿ ಸಾರ್ವಜನಿಕರಿಗೆ ತೊಂದರೆ ಮತ್ತು ಅಪಾಯವನ್ನುಂಟು ಮಾಡಿರುವ  ಬಗ್ಗೆ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ನ ಮಾಲಿಕರ ಮತ್ತು ಆಯೋಜಕರ ಮೇಲೆ ಬಜಪೆ ಪೊಲೀಸರು ಮೊ.ನಂ 73/2026 ಕಲಂ 126(2), 285, 292 BNS ಕಲಂ 122 IMV Act ರಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ತನಿಖೆ ಪ್ರಗತಿಯಲ್ಲಿರುತ್ತದೆ.

- Advertisement -

Latest News

error: Content is protected !!