Sunday, June 7, 2026
Homeತಾಜಾ ಸುದ್ದಿಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರು; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಾನವೀಯತೆ ಮೆರೆದಿದ್ದಾರೆ.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಹಾಸನಕ್ಕೆ  ತೆರಳುತ್ತಿದ್ದಾಗ ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ವಿಕ್ರಮ್ ಎಂಬ ವ್ಯಕ್ತಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ವಿಕ್ರಂ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೆದ್ದಾರಿ ಗಸ್ತು ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಕುಮಾರಸ್ವಾಮಿ ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದರು.

- Advertisement -

Latest News

error: Content is protected !!