Wednesday, June 3, 2026
Homeತಾಜಾ ಸುದ್ದಿಮಗಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನು ಆತ್ಮಹತ್ಯೆಗೆ ಶರಣಾದ ಮಹಿಳೆ

ಮಗಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನು ಆತ್ಮಹತ್ಯೆಗೆ ಶರಣಾದ ಮಹಿಳೆ

- Advertisement -
- Advertisement -

ಬೆಂಗಳೂರು: ಮಹಿಳೆ ಮಗಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನು ಆತ್ಮಹತ್ಯೆಗೆ ಶರಣಾದ ಬೆಂಗಳೂರಿನ ವೈಟ್‌ಫೀಲ್ಡ್ ಸಮೀಪದ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.

ಇಮ್ಮಡಿಹಳ್ಳಿಯ ನಿವಾಸಿ ಸುವರ್ಣ (40) ಹಾಗೂ ಅವರ ಪುತ್ರಿ ಕಾರುಣ್ಯ (14) ಮೃತಪಟ್ಟ ದುರ್ದೈವಿ. ಇಂದು ಬೆಳಿಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಈ ಕೃತ್ಯ ನಡೆದಿದೆ. ಘಟನೆ ಸಂಭವಿಸಿದ ವೇಳೆ ಸುವರ್ಣ ಅವರ ಅತ್ತೆ ಮತ್ತು ಮಾವ ಮನೆಯಲ್ಲೇ ಇದ್ದರು. ಮಗಳನ್ನು ಕೊಠಡಿಯೊಳಗೆ ಕರೆದೊಯ್ದ ಸುವರ್ಣ, ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾರೆ. ಬಹಳ ಹೊತ್ತಾದರೂ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವೈಟ್‌ಫೀಲ್ಡ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಸುವರ್ಣ ಅವರು ಮೊದಲು ಮಗಳು ಕಾರುಣ್ಯಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ, ನಂತರ ಅದೇ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುವರ್ಣ ಅವರ ಪತಿ ವೃತ್ತಿಯಲ್ಲಿ ಚಾಲಕರಾಗಿದ್ದು, ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲವಾದರೂ, ಪೊಲೀಸರು ಸುವರ್ಣ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಸಮಸ್ಯೆ ಅಥವಾ ಮಾನಸಿಕ ಖಿನ್ನತೆಯೇ ಈ ಘಟನೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!