Friday, June 5, 2026
Homeಕರಾವಳಿಉಡುಪಿಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿ

- Advertisement -
- Advertisement -

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿಯಾದ ಘಟನೆ ಕಾರ್ಕಳ-ಹೆಬ್ರಿ ರಾಜ್ಯ ಹೆದ್ದಾರಿಯ ಮುನಿಯಾಲಿನ ಚಟ್ಕಲ್ ಪಾದೆ ಎಂಬಲ್ಲಿ ಬುಧವಾರ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಈ ಅಪಘಾತಕ್ಕೆ ಈಡಾಗಿದೆ. ಚಟ್ಕಲ್ ಪಾದೆ ಬಳಿ ಸಂಚರಿಸುತ್ತಿದ್ದ ವೇಳೆ ಎದುರಿನಲ್ಲಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಬಹುದಾಗಿದ್ದ ಡಿಕ್ಕಿಯನ್ನು ತಪ್ಪಿಸಲು ಚಾಲಕ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿ ಮಹಿಳೆ ಮತ್ತು ಮಗು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!