Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಳ್ತಂಗಡಿ : ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿತ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆ ನಡೆಸಿ ಬಳಿಕ ಸೊಕೊ ತಂಡದಿಂದ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಬೆಳ್ತಂಗಡಿ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಬಂಧನದ ವಿವರ: ಪ್ರಕರಣದ ಸಂಬಂಧ ವಿಚಾರಣೆಗಾಗಿ ಮೂರು ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಏ.15ರಂದು ಬೆಳಗ್ಗೆ ಬೆಂಗಳೂರಿನ ಬಸವನಗುಡಿ ಕಚೇರಿಯಿಂದ ಬೆಳ್ತಂಗಡಿ ಪೊಲೀಸರು ಬಂಧಿಸಿ ಬಳಿಕ ಬೆಳ್ತಂಗಡಿ ಠಾಣೆಗೆ ಸಂಜೆ 6 ಗಂಟೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದರು.

ಬೆಳ್ತಂಗಡಿ ಪೊಲೀಸರು ಸೊಕೊ ತಂಡದಿಂದ ಪುನೀತ್ ಕೆರೆಹಳ್ಳಿಯ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಸೂಕ್ತ ಠಾಣಾ ಜಾಮೀನಿನಲ್ಲಿ ರಾತ್ರಿ 9:45 ಕ್ಕೆ ಬಿಡುಗಡೆ ಮಾಡಿದ್ದಾರೆ.

- Advertisement -

Latest News

error: Content is protected !!