ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬುಧವಾರದಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಬ್ರಿಜೇಶ್ ಚೌಟ ಅವರ ಕಚೇರಿಯಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು.
ಸಂಸದ ಚೌಟ ಅವರನ್ನು ವಿವಿಧ ಕೆಲಸಗಳ ನಿಮಿತ್ತ ಭೇಟಿ ಮಾಡಲು ಬಂದಿದ್ದ ಮಹಿಳೆಯರು, ಕೇಂದ್ರ ಸರ್ಕಾರದ ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಜಾರಿಯಾಗುತ್ತಿರುವ ಸಂದರ್ಭದಲ್ಲಿ ಮಹಿಳೆಯರು ಸ್ವಯಂ ಪ್ರೇರಿತರಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದರು.
ಅಷ್ಟೇಅಲ್ಲದೆ ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷ ಮಂಜುಳಾ ರಾವ್, ಜಿಲ್ಲಾ ವಕ್ತಾರ ಮಾಧವ್ ಮಾವೆ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಕಾರ್ಯಕಾರಣಿ ಸದಸ್ಯೆ ಸುಲೋಚನಾ ಭಟ್, ಸಮಾಜ ಸೇವಕರಾದ ಹಿಲ್ಡಾ ರಾಯಪ್ಪನ್, ನಿಕಟ ಪೂರ್ವ ಮನಪಾ ಸದಸ್ಯರು, ಮುಖಂಡರು ಪಂಚಾಯತ್ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.


