Sunday, June 7, 2026
Homeಕರಾವಳಿಉಡುಪಿಉಡುಪಿ: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ; ಓರ್ವ ವ್ಯಕ್ತಿ ಸ್ಥಳದಲ್ಲೇ...

ಉಡುಪಿ: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ; ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪಾಂಗಾಳ ಕಟ್ಟಿಕೆರೆ ಬಳಿ ನಡೆದಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಲಾರಿಯೊಂದು ಅತಿವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಒಬ್ಬರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಮತ್ತು ಪೊಲೀಸರ ನೆರವಿನಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಕಾಪು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಬಳಸಿ ನಜ್ಜುಗುಜ್ಜಾದ ಕಾರನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!