Saturday, June 6, 2026
Homeಕರಾವಳಿಸುಬ್ರಹ್ಮಣ್ಯ:ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಸುಬ್ರಹ್ಮಣ್ಯ:ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಸುಬ್ರಹ್ಮಣ್ಯ:ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಕಾರು ಎಂಬಲ್ಲಿ ನಡೆದಿದೆ.

ಕಲ್ಮಕ್ಕಾರು ಗ್ರಾಮದ ನಿವಾಸಿ ತುಕರಾಮ ಗೌಡ (63) ಮೃತರು . ತುಕಾರಾಂ ಅವರು ಕಳೆದ ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು . ಇದರಿಂದ ತೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದ ಅವರು, ಎಪ್ರಿಲ್ 16 ರಂದು ಬೆಳಿಗ್ಗೆ ಮನೆಯಲ್ಲಿದ್ದ ವೇಳೆ ಮೈಲುತುತ್ತು ಸೇವಿಸಿದ್ದಾರೆ.

ವಿಚಾರ ಗೊತ್ತಾಗುತ್ತಿದ್ದಂತೆ ಮನೆಯಲ್ಲಿದ್ದ ಮಗ ಪವನ್ ಕೃಷ್ಣ, ತಾಯಿ ಸರಸ್ವತಿ ಮತ್ತು ಚಿಕ್ಕಪ್ಪ ಪದ್ಮನಾಭ ಅವರು ತಕ್ಷಣವೇ ತುಕರಾಮ ಗೌಡ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೆ.ವಿ.ಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ತುಕರಾಮ ಗೌಡ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ ಸುಮಾರು 2:00 ಗಂಟೆಗೆ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಕುರಿತು ಮೃತರ ಮಗ ಪವನ್ ಕೃಷ್ಣ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!