Saturday, June 6, 2026
Homeತಾಜಾ ಸುದ್ದಿಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ:ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ...

ಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ:ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

- Advertisement -
- Advertisement -

ಬೆಂಗಳೂರು : ಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ

16ಲಕ್ಷ ರೂ. ದಂಡದ ಮೊತ್ತ ವಿಧಿಸಲಾಗಿದ್ದು ಈ ಪರಿಹಾರವನ್ನು ಯೋಗೇಶ್ ಗೌಡ ಮಕ್ಕಳಿಗೆ ಹಾಗೂ ಸಹೋದರ ಗುರುನಾಥ್ ಗೌಡ ಗೆ ನೀಡಲು ಸೂಚನೆ ನೀಡಲಾಗಿದೆ.

ಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಈ ಹತ್ಯೆಗೆ ಸಂಬಂಧಿಸಿದಂತೆ ಕುಲಕರ್ಣಿ ಸೇರಿದಂತೆ ಒಟ್ಟು 17 ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ.

ವಿನಯ್ ಕುಲಕರ್ಣಿ, ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿದ್ದ ಚನ್ನಕೇಶವ ಟಿಂಗರೀಕರ್‌ ಸೇರಿದಂತೆ 17 ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 15ರಂದು ದೋಷಿಗಳೆಂದು ಘೋಷಿಸಿ ಮಹತ್ವದ ತೀರ್ಪು ನೀಡಿತ್ತು. ಗುರುವಾರವಾಕ್ಕೆ ಶಿಕ್ಷೆಯ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲವು ಸಿಬಿಐ ಮತ್ತು ಆರೋಪಿಗಳ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿತು. ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಆರೋಪಿಗಳ ಪರ ವಕೀಲರು ವಾದ ಮಂಡಿಸಿದ್ದರೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು. ಬಳಿಕ ಇಂದಿಗೆ ಅಂದರೆ ಏಪ್ರಿಲ್ 17ಕ್ಕೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಪ್ರಕರಣದ 15ನೇ ಅಪರಾಧಿಯಾಗಿರುವ ಪ್ರಭಾವಿ ರಾಜಕಾರಣಿ ವಿನಯ್ ಕುಲಕರ್ಣಿ ಹತ್ಯೆಯ ಹಿಂದೆ ನಡೆದ ಒಳಸಂಚಿನಲ್ಲಿ ಭಾಗಿಯಾದ ಹಿನ್ನೆಲೆ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ಉಳಿದ ಆರೋಪಿಗಳಿಗೂ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

2016ರ ಜೂನ್‌ನಲ್ಲಿ ನಡೆದ ಕೊಲೆಗೆ ಸಂಬಂಧಿಸಿ ಯೋಗೇಶ್‌ ಗೌಡ ಕೊಲೆ ಪ್ರಕರಣ ಸಂಬಂಧ ಸುಮಾರು 8 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಸಂಜೆ ಅಂತಿಮ ತೀರ್ಪು ಪ್ರಕಟಿಸಿ ಅಪರಾಧಿಗಳೆಂದು ಘೋಷಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು, 15ನೇ ಆರೋಪಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ವಿಕ್ರಮ್‌ ಬಳ‍್ಳಾರಿ, ಕೀರ್ತಿ ಕುಮಾರ್‌ ಬಸವರಾಜ್‌ ಕುರಹಟ್ಟಿ, ಸಂದೀಪ್‌ ಸವದತ್ತಿ, ವಿನಾಯಕ ಕಟಗಿ, ಮಹಾಬಲೇಶ್ವರ ಹೊಂಗಲ್‌, ಸಂತೋಷ್‌ ಸವದತ್ತಿ, ದಿನೇಶ್‌, ಅಶ್ವತ್ಥ್, ಸುನೀಲ್‌, ನಜೀರ್ ಅಹ್ಮದ್‌, ಶಹನವಾಜ್‌, ನೂತನ್‌, ಹರ್ಷಿತ್‌, ಚಂದ್ರಶೇಖರ್‌ ಇಂಡಿ, ವಿಕಾಸ್‌ ಕಲಬುರಗಿ, ಪೊಲೀಸ್‌ ಇನ್ಸ್‌ಪೆಕ್ಟರ್‌ ಚನ್ನಕೇಶವ ಬಿ.ಟಿಂಗರಿಕರ್‌ ಒಟ್ಟು 17 ಮಂದಿಗೆ ಶಿಕ್ಷೆ ಪ್ರಕಟಿಸಿದ್ದಾರೆ

- Advertisement -

Latest News

error: Content is protected !!