- Advertisement -
![]()
- Advertisement -
ಮಂಗಳೂರು: ಖಾಸಗಿ ಬಸ್ ಮತ್ತು ಆಟೊ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಶುಕ್ರವಾರ ಸಂಜೆ ವರದಿಯಾಗಿದೆ.
ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುತ್ತಿದ್ದ ಖಾಸಗಿ ಬಸ್ ಕೆತ್ತಿಕಲ್ ಬಳಿ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದು, ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಥಳೀಯರು ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


