Saturday, June 6, 2026
Homeಕರಾವಳಿಮಂಗಳೂರುಬಂಟ್ವಾಳ;  ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬಂಟ್ವಾಳ;  ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ;  ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕುಂ ಞ್ಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ(29)  ಮೃತ ದುರ್ದೈವಿ.  ಹರ್ಷಿತ್ ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶುಕ್ರವಾರ ರಾತ್ರಿ  ಮನೆಯವರೊಂದಿಗೆ ಹರ್ಷಿತ್ ಊಟ ಮಾಡಿ ಮನೆಯ ಹೊರಗೆ ಮಲಗಿದ್ದರು. ಬೆಳಗ್ಗೆ ಮನೆಯವರು ಎದ್ದು ನೋಡಿದಾಗ ಹರ್ಷಿತ್ ನಾಪತ್ತೆಯಾಗಿದ್ದರು.ಮನೆಯವರು ಹುಡುಕಿದಾಗ ಮನೆಯ ಹಿಂದಿನ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹರ್ಷಿತ್ ತಂದೆ ಹಾಗೂ ತಾಯಿಯೊಂದಿಗೆ ವಾಸವಾಗಿದ್ದರು. ಇಬ್ಬರು ಸಹೋದರಿಯರಿಗೆ ಮದುವೆಯಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!