Wednesday, June 3, 2026
Homeಚಿಕ್ಕಮಗಳೂರುಕಾಡುಕೋಣ ದಾಳಿಯಿಂದ ಯುವಕ ಸಾವು

ಕಾಡುಕೋಣ ದಾಳಿಯಿಂದ ಯುವಕ ಸಾವು

- Advertisement -
- Advertisement -

ಚಿಕ್ಕಮಗಳೂರು; ಕಾಡುಕೋಣ ದಾಳಿಯಿಂದ ಯುವಕ ಸಾವನ್ನಪ್ಪಿರುವ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದ ಮೈದಾಡಿ ಯಮಕೊಂಡ ಎಸ್ಟೇಟ್‌ನಲ್ಲಿ ನಡೆದಿದೆ. ಹೊರನಾಡು ಸಮೀಪದ ಕವನಹಳ್ಳದ ನಿವಾಸಿ ಚೇತನ್ (30) ಮೃತ ದುರ್ದೈವಿ.

ಮೈದಾಡಿಯ ಎಸ್ಟೇಟ್‌ನಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶನಿವಾರ ಬೆಳಿಗ್ಗೆ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡುಕೋಣವೊಂದು ಏಕಾಏಕಿ ಚೇತನ್ ಮೇಲೆ ದಾಳಿ ಮಾಡಿದೆ. ದಾಳಿಯ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸ್ಥಳೀಯರು ಮತ್ತು ಎಸ್ಟೇಟ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಯು ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಮೃತನ ತಾಯಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

- Advertisement -

Latest News

error: Content is protected !!