Thursday, June 4, 2026
HomeUncategorizedಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಜೋಡಿ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಜೋಡಿ

- Advertisement -
- Advertisement -

ಮುಂಬೈ; ಬಾಲಿವುಡ್ ನ ಖ್ಯಾತ ಜೋಡಿ ದೀಪಿಕಾ ಪಡುಕೋಣೆ ಮತ್ತು ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ದೀಪಿಕಾ ಹಾಗೂ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬುವುದನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ದೀಪಿಕಾ ಪಡುಕೋಣೆ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ವಿಶೇಷವೆಂದರೆ, ಅವರ ಮೊದಲ ಪುತ್ರಿ  ದುವಾ ಪಡುಕೋಣೆ ಸಿಂಗ್ ಪ್ರೆಗ್ನೆನ್ಸಿ ಟೆಸ್ಟ್ ಕಿಟ್ ಹಿಡಿದುಕೊಂಡಿರುವ ಭಾವಚಿತ್ರವನ್ನು ಪೋಸ್ಟ್ ಮಾಡುವ ಮೂಲಕ ವಿಭಿನ್ನವಾಗಿ ಈ ವಿಷಯವನ್ನು ಜಗತ್ತಿಗೆ ತಿಳಿಸಿದ್ದಾರೆ. ಈ ಪೋಸ್ಟ್‌ಗೆ ದೀಪಿಕಾ ಅವರು ದೃಷ್ಟಿ ತಗುಲದಿರಲಿ ಎಂಬ ಅರ್ಥದ ‘ನಜರ್’  ಎಮೋಜಿಗಳನ್ನು ಬಳಸಿದ್ದಾರೆ.

ದೀಪಿಕಾ ಮತ್ತು ರಣವೀರ್ ದಂಪತಿಗೆ ಸೆಪ್ಟೆಂಬರ್ 8, 2024 ರಂದು ಮೊದಲ ಪುತ್ರಿ ದುವಾ ಜನಿಸಿದ್ದರು. ಈಗ ಮೊದಲ ಮಗುವಿನ ಜನನದ ಕೇವಲ 18 ತಿಂಗಳ ಅಂತರದಲ್ಲಿಯೇ ಎರಡನೇ ಮಗುವಿನ ಆಗಮನದ ಸುದ್ದಿಯನ್ನು ನೀಡುವ ಮೂಲಕ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದ್ದಾರೆ. ಸುದ್ದಿ ಹೊರಬೀಳುತ್ತಿದ್ದಂತೆ ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದ ಗಣ್ಯರು ದಂಪತಿಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಲಿಯಾ ಭಟ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕ ಸಹಕಲಾವಿದರು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

- Advertisement -

Latest News

error: Content is protected !!