ಮಂಗಳೂರು: ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪೆರ್ಮಾನ್ನೂರಿನ ಪರ್ವೇಜ್ @ ದಾವೂದ್ ಪರ್ವೇಜ್ (40), ಪೆರ್ಮಾನ್ನೂರಿನ ನಜರತ್ ಅಲಿ (37) ಬಂಧಿತ ಆರೋಪಿಗಳು.
ದಿನಾಂಕ: 19-04-2026 ರಂದು ಮಂಗಳೂರು ನಗರ ಜೆಪ್ಪಿನ ಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸ ರಿಗೆ ಬಂದ ಖಚಿತ ಮಾಹಿತಿಯಂತೆ ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಆರೋಪಿ ಫರ್ವೇಜ್ ಎಂಬಾತನು ಮಂಗಳೂರಿನ ಯುವ ಸಮುದಾಯ ಮತ್ತು ಕಾಲೇಜು ವಿಧ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ MDMA ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿ ಫರ್ವೇಜ್ ಎಂಬಾತನ ವಿರುದ್ದ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ, ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈತನು ರೂಢಿಗತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಈತನೊಂದಿಗೆ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತಾ ಈ ಕೃತ್ಯದಲ್ಲಿ ತೊಡಗಿಸಿಕೊಂಡಿರುತ್ತಾನೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ತನಿಖೆ ಮುಂದುವರೆದಿದೆ.


