Friday, June 5, 2026
Homeಕರಾವಳಿಉಡುಪಿಉಡುಪಿ; ಪತ್ನಿಗೆ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವಂತೆ ಕಿರುಕುಳ ನೀಡಿ ಕೊಲೆಗೆ ಯತ್ನ ಆರೋಪ; ವಾಮದಪದವು ಸರ್ಕಾರಿ...

ಉಡುಪಿ; ಪತ್ನಿಗೆ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವಂತೆ ಕಿರುಕುಳ ನೀಡಿ ಕೊಲೆಗೆ ಯತ್ನ ಆರೋಪ; ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲು

- Advertisement -
- Advertisement -

ಉಡುಪಿ; ಪತ್ನಿಗೆ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವಂತೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಬಂಟ್ವಾಳ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲಾಗಿದೆ. ಬಂಟ್ವಾಳದ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಜಯರಾಮ ಶೆಟ್ಟಿ ಎಂಬುವವರ ವಿರುದ್ಧ ಪತ್ನಿ ನಿಶಿತಾ ಶೆಟ್ಟಿ ದೂರು ದಾಖಲಿಸಿದ್ದಾರೆ.


ಅಂಪಾರು ಗ್ರಾಮದ ನಿಶಿತಾ ಶೆಟ್ಟಿ (26) ಅವರು ಜಯರಾಮ ಶೆಟ್ಟಿ ಅವರನ್ನು 2021ರಲ್ಲಿ ವಿವಾಹವಾಗಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪತ್ನಿ ಮತ್ತು ಮಕ್ಕಳು ಬೌದ್ಧ ಧರ್ಮಕ್ಕೆ ಮತಾಂತರವಾಗುವುದು ಅನಿವಾರ್ಯ ಎಂದು ಜಯರಾಮ ಶೆಟ್ಟಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಇದಕ್ಕೆ ನಿಶಿತಾ ವಿರೋಧ ವ್ಯಕ್ತಪಡಿಸಿದಾಗ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದರುಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಿಂದೆ ಎರಡನೇ ಮಗುವಿಗೆ ಜನ್ಮ ನೀಡಿದ್ದ ನಿಶಿತಾ ಅವರು ತವರು ಮನೆ ಬಲಾಡಿಯಲ್ಲಿದ್ದರು. ಏಪ್ರಿಲ್ 18ರಂದು ಮನೆಗೆ ಬಂದಿದ್ದ ಜಯರಾಮ ಶೆಟ್ಟಿ, ಕ್ಷುಲ್ಲಕ ಕಾರಣಕ್ಕೆ ಗಲಾಟೆ ತೆಗೆದು ನಿಶಿತಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಕೊಲ್ಲುವ ಉದ್ದೇಶದಿಂದ ಚೂಡಿದಾರ ಶಾಲಿನಿಂದ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ್ದಾನೆ. ಕುಟುಂಬಸ್ಥರು ಹಲ್ಲೆಯನ್ನು ಬಿಡಿಸಿದಾಗ ಪತ್ನಿ ಮತ್ತು ಮಾವನಿಗೆ ಜೀವ ಬೆದರಿಕೆ ಹಾಕಿದ್ದಾರೆ. ಶಂಕರನಾರಾಯಣ ಪೊಲೀಸರು ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!