Saturday, June 6, 2026
Homeಕರಾವಳಿಮಂಗಳೂರುಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್‌ಪಿ...

ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್‌ಪಿ ಕಾಶಿನಾಥ್ ದೂರು

- Advertisement -
- Advertisement -

ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಎಸ್‌ಪಿ ಕಾಶಿನಾಥ್ ದೂರು ಕೊಟ್ಟಿದ್ದಾರೆ. ಕಾಶಿನಾಥ್ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿಜಿಪಿ ಸಲೀಂ ಅವರಿಗೆ ಗಂಭೀರ ಆರೋಪಗಳಿರುವ ಪತ್ರ ಬರೆದಿದ್ದಾರೆ.

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರು ತಮಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಮತ್ತು ಕನ್ನಡಿಗ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು ತಾರತಮ್ಯ ಮಾಡುತ್ತಿದ್ದಾರೆ ಎಂದು ಎಸ್‌ಪಿ ಕಾಶಿನಾಥ್ ದೂರಿದ್ದಾರೆ. “ನನಗೆ ಕೇವಲ 30 ನಿಮಿಷಗಳ ಕಾಲಾವಕಾಶ ನೀಡಿ, ಈ ಅಧಿಕಾರಿಯ ಕರ್ಮಕಾಂಡಗಳನ್ನು ಬಯಲು ಮಾಡುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

 ಸರಣಿ ಮೆಮೊಗಳನ್ನು ನೀಡಿ ಕಿರುಕುಳ ನೀಡಲಾಗುತ್ತಿದೆ. ಅನ್ಯಾಯದ ವಿರುದ್ಧ ಹಲವು ಬಾರಿ ಲಿಖಿತ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಕಾಶಿನಾಥ್ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಶೀತಲ ಸಮರವು ಸರ್ಕಾರಕ್ಕೆ ಮುಜುಗರ ತಂದಿದ್ದು, ಗೃಹ ಸಚಿವರು ಈ ಕುರಿತು ಮಾಹಿತಿ ಪಡೆದಿದ್ದಾರೆ. ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಆಂತರಿಕ ತನಿಖೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

- Advertisement -

Latest News

error: Content is protected !!