Tuesday, June 30, 2026
Homeತಾಜಾ ಸುದ್ದಿನಾಳೆ (ಎ.23) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ನಾಳೆ (ಎ.23) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

- Advertisement -
- Advertisement -

ಬೆಂಗಳೂರು: ನಾಳೆ (ಎ.23) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:karresults.nic.in ಅಥವಾ kseab.karnataka.gov.in. ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕೋರ್ಟ್ ಆದೇಶದಿಂದ ಫಲಿತಾಂಶ ವಿಳಂಬವಾಗಬಹುದು ಎಂಬ ಆತಂಕ ಪೋಷಕರಲ್ಲಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, “ನಾಳೆ ಮಧ್ಯಾಹ್ನ 12 ಗಂಟಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆಯಾಗಲಿದೆ. ಯಾವುದೇ ತಾಂತ್ರಿಕ ಅಡ್ಡಿಯಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಈ ವರ್ಷದಿಂದಲೇ ಅಂಕ ನೀಡುವ ಪದ್ಧತಿ ಜಾರಿಯಾಗಿದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿತ್ತು. ಈ ಕುರಿತು ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಲಾಗಿದೆ. ಅವರ ಸೂಚನೆಯ ಮೇರೆಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ ಎಸ್ ಎಲ್ ಪರೀಕ್ಷೆ 1ರ ಫಲಿತಾಂಶ ಪ್ರಕಟಿಸುವುದಾಗಿ ” ಎಂದು ಸಚಿವರು ತಿಳಿಸಿದ್ದಾರೆ.

ಪರೀಕ್ಷಾ ಮಂಡಳಿಯು ಫಲಿತಾಂಶ ಪ್ರಕಟಿಸಲು ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ವೆಬ್‌ಸೈಟ್ ಗಮನಿಸುತ್ತಿರಲು ಸೂಚಿಸಲಾಗಿದೆ.

- Advertisement -

Latest News

error: Content is protected !!