ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದುಮ ಶೇಕಡಾ ಫಲಿತಾಂಶ ಪಡೆಯೋದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಪಡೆದರೆ, ಉಡುಪಿ ಜಿಲ್ಲೆ 98.18 ಶೇಕಡಾ ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಗಳಿಸಿದೆ. 85.06 ಶೇಕಡಾ ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. 7,70,209 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದಿವೆ ಎಂದಿದ್ದಾರೆ.

ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದು 625 ಕ್ಕೆ 625 ಅಂಕಗಳನ್ನು ಮೂರು ವಿದ್ಯಾರ್ಥಿಗಳು ಗಳಿಸಿದ್ದಾರೆ. ಬೆಳಗಾವಿಯ ರೂಪ ಚೆನ್ನಗೌಡ ಪಾಟೀಲ್ ಗೆ 625ಕ್ಕೆ 625, ಹಾಸನದ ಜಾನವಿ ಹಾಗೂ ಉತ್ಸವ್ ಪಾಟೀಲ್ 625 ಕ್ಕೆ 625 ಅಂಕಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಾಜ್ಯಕ್ಕೆ ಈ ಮೂವರು ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ.
ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯಾದ್ಯಂತ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8,12,855 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುತ್ತಿದ್ದರೆ, 62,845 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 27,189 ಖಾಸಗಿ ವಿದ್ಯಾರ್ಥಿಗಳು.
.


