- Advertisement -
![]()
- Advertisement -
ಸುಳ್ಯ: ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಏಪ್ರಿಲ್ 23 ರಂದು ಸಂಜೆ ನಡೆದಿದೆ.
ಮೃತಪಟ್ಟ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇವರು ಕೇರಳ ಮೂಲದವರೆಂದು ಶಂಕಿಸಲಾಗಿದ್ದು, ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ. ಬಸ್ ನಿಲ್ದಾಣದ ಬಳಿ ಓಡಾಡುತ್ತಿದ್ದಾಗ ದಿಢೀರ್ ಆಗಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು.
- Advertisement -


