Tuesday, June 9, 2026
Homeಅಪರಾಧಆಜ್ರಿ ಉಮಾಮಹೇಶ್ವರ ದೇವಸ್ಥಾನದ ಹುಂಡಿ ಕಳ್ಳತನ; ಕಳ್ಳರು ಸೇರಿದಂತೆ 1.50 ಲಕ್ಷ ಮೌಲ್ಯದ ಸ್ವತ್ತು ವಶ

ಆಜ್ರಿ ಉಮಾಮಹೇಶ್ವರ ದೇವಸ್ಥಾನದ ಹುಂಡಿ ಕಳ್ಳತನ; ಕಳ್ಳರು ಸೇರಿದಂತೆ 1.50 ಲಕ್ಷ ಮೌಲ್ಯದ ಸ್ವತ್ತು ವಶ

- Advertisement -
- Advertisement -

ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಪ್ರಸಿದ್ಧ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣವನ್ನು ಶಂಕರನಾರಾಯಣ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ನಿವಾಸಿ ಮುತ್ತಪ್ಪ ಶರಣಪ್ಪ ವಾಲಿಕರ್ (40 ಎನ್ನುವ ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಯ ಹಿನ್ನೆಲೆ: ಏಪ್ರಿಲ್ 20ರಂದು ಬೆಳಿಗ್ಗೆ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ನುಗ್ಗಿ ಕಾಣಿಕೆ ಹುಂಡಿಯನ್ನು ಹೊತ್ತೊಕೊಂಡು ಹೋಗಿದ್ದನು. ಈ ದೃಶ್ಯವು ಸಿಸಿಟಿವಿಯಲ್ಲಿ ದಾಖಲಾಗಿದ್ದು, ದೇವಸ್ಥಾನದ ಮಂಡಳಿಯು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಈ ದೂರಿನ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೊಬೈಲ್ ಲೊಕೇಶನ್ ಹಾಗೂ ಖಚಿತ ಮಾಹಿತಿಯ ಮೇರೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್, 3 ಮೊಬೈಲ್ ಫೋನ್‌ಗಳು ಮತ್ತು ಕಳವು ಮಾಡಲಾಗಿದ್ದ ಕಾಣಿಕೆ ಹುಂಡಿ ಸೇರಿದಂತೆ ಸುಮಾರು 1.50 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!