Friday, June 5, 2026
Homeಕರಾವಳಿಮಂಗಳೂರುನೆಲ್ಯಾಡಿ; ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಚಾಲಕನಿಗೆ ಕಾರು ಡಿಕ್ಕಿ; ಗಂಭೀರ ಗಾಯ

ನೆಲ್ಯಾಡಿ; ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಚಾಲಕನಿಗೆ ಕಾರು ಡಿಕ್ಕಿ; ಗಂಭೀರ ಗಾಯ

- Advertisement -
- Advertisement -

ನೆಲ್ಯಾಡಿ; ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಚಾಲಕನಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗಳಾಗಿರುವ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಗಾಂಧಿನಗರದ ಸೀಬಿನಕೆರೆ ನಿವಾಸಿ ಶೈಕ್ ಬುಡನ್ (53) ಗಾಯಗೊಂಡ ಲಾರಿ ಚಾಲಕ.

 ಬೆಂಗಳೂರಿನಿಂದ ಮಂಗಳೂರಿಗೆ ಕಬ್ಬಿಣದ ರಾಡುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಲಾವತಡ್ಕದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಬೆಂಗಳೂರು ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಕಾರನ್ನು ಮಂಗಳೂರು ನಿವಾಸಿ, ಉದ್ಯಮಿ ರಂಜನ್ (36) ಎಂಬವರು ಚಲಾಯಿಸುತ್ತಿದ್ದರು. ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಚಾಲಕನಿಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಶೈಕ್ ಬುಡನ್ ಅವರ ದೇಹಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 ಅಪಘಾತಕ್ಕೀಡಾದ ಲಾರಿಯಲ್ಲಿ ಇಬ್ಬರು ಚಾಲಕರಿದ್ದು, ಅದೃಷ್ಟವಶಾತ್ ಮತ್ತೊಬ್ಬ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

- Advertisement -

Latest News

error: Content is protected !!