- Advertisement -
![]()
- Advertisement -
ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕ ಶವವಾಗಿ ಪತ್ತೆಯಾಗಿರುವ ಘಟನೆ ಎಂ.ಜಿ.ಎಂ ಕಾಲೇಜು ಸಮೀಪ ನಡೆದಿದೆ. ಉಡುಪಿ ಸಂಸ್ಕೃತ ಕಾಲೇಜಿನ ಉಪನ್ಯಾಸಕ ಗಣಪತಿ ಭಟ್ (55) ಮೃತರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಗಣಪತಿ ಭಟ್ ಅವರು ಉಡುಪಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅವಿವಾಹಿತರಾಗಿದ್ದ ಇವರು ವೈಯಕ್ತಿಕ ಕಾರಣಗಳಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬ
ಹುದು ಎಂದು ಶಂಕಿಸಲಾಗಿದೆ. ಇವರು ನಾಪತ್ತೆಯಾದ ಬಗ್ಗೆ ಈಗಾಗಲೇ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶನಿವಾರ ಬಾವಿಯಲ್ಲಿ ಮೃತದೇಹ ಪತ್ತೆಯಾದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಮೇಲೆತ್ತಲು ಸಹಕರಿಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು. ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.
- Advertisement -


