Saturday, June 6, 2026
Homeಕರಾವಳಿಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಬಸ್ ಪಲ್ಟಿ20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಬಸ್ ಪಲ್ಟಿ20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಎ.26 ರಂದು ರವಿವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಧರ್ಮಸ್ಥಳದಿಂದ ಆಂಧ್ರಪ್ರದೇಶದ ಕಡೆಗೆ ಪ್ರಯಾಣಿಸುತ್ತಿದ್ದ ಬಸ್ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಆಂಧ್ರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಕ್ಷೇತ್ರ ದರ್ಶನ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ರಕ್ಷಣೆಗೆ ಧಾವಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸುಮಾರು 5 ರಿಂದ 6 ಆಂಬುಲೆನ್ಸ್‌ ಗಳು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿವೆ.ಗಾಯಾಳುಗಳನ್ನು ಕಕ್ಕಿಂಜೆಯ ಕೃಷ್ಣ ಆಸ್ಪತ್ರೆ ಹಾಗೂ ಬೆಳ್ತಂಗಡಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅದೃಷ್ಟವಶಾತ್ ಈವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಾಟಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

- Advertisement -

Latest News

error: Content is protected !!