- Advertisement -
![]()
- Advertisement -
ಕೊಡಗು: ಕೋವಿಯಿಂದ ಗುಂಡು ಹಾರಿಸಿಕೊಂಡು ಸರ್ಕಾರಿ ಶಾಲಾ ಶಿಕ್ಷಕಿ ಸಾವಿಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಗ್ರಾಮದ ನಿವಾಸಿ ಎ.ರೋಹಿಣಿ (51) ಆತ್ಮಹತ್ಯೆಗೆ ಮಾಡಿಕೊಂಡವರು.
ನಿನ್ನೆ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಮನೆಯವರೆಲ್ಲರೂ ನಿದ್ರೆಯಲ್ಲಿದ್ದಾಗ, ಕೋವಿಯಿಂದ ಗುಂಡು ಹಾರಿಸಿಕೊಂಡು ರೋಹಿಣಿ ಸಾವಿಗೆ ಶರಣಾಗಿದ್ದಾರೆ. ಮೃತ ರೋಹಿಣಿ ಅವರು ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಯಂತಹ ತೀವ್ರ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
- Advertisement -


