Saturday, June 6, 2026
Homeಕರಾವಳಿಏ.29- 30 ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ತಾಂತ್ರಿಕ ಸಮ್ಮೇಳನ

ಏ.29- 30 ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ತಾಂತ್ರಿಕ ಸಮ್ಮೇಳನ

- Advertisement -
- Advertisement -

ಮಂಗಳೂರು: ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಎಪ್ರಿಲ್ 29 ಮತ್ತು 30 ರಂದು ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ಸ್ (IEEE) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ “ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ” ಗಳ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಆಯೋಜಿಸಲಾಗಿದೆ.

ಭಾರತದ ಖ್ಯಾತ ಅಂತರಿಕ್ಷ ವಿಜ್ಞಾನಿ, ದೇಶದ ಅತ್ಯುನ್ನತ ಅಂತರಿಕ್ಷ ಸಂಸ್ಥೆ “ಇಸ್ರೋ” ಮಾಜಿ ಅಧ್ಯಕ್ಷರು ಹಾಗೂ “ಪದ್ಮಶ್ರೀ” ಪುರಸ್ಕೃತರಾದ ಶ್ರೀ ಎ. ಎಸ್. ಕಿರಣ್ ಕುಮಾರ್ ರವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಬುಧವಾರ, ಎಪ್ರಿಲ್ 29 ರಂದು ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಐಇಇಇ ಮಂಗಳೂರು ಉಪವಿಭಾಗದ ಅಧ್ಯಕ್ಷರಾದ ಡಾ. ವೇಣುಗೋಪಾಲ ಪಿ. ಎಸ್., ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರುಗಳಾದ ಶ್ರೀಮತಿ. ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಪ್ರೊ. ಶ್ರೀಮತಿ. ಎ. ಮಿತ್ರ ಎಸ್ ರಾವ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿ ಯವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಡಾ. ರಾಮಕೃಷ್ಣ ಎನ್. ಹೆಗಡೆ (ಮುಖ್ಯಸ್ಥರು, ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಮುಕ್ಕ), ಪ್ರೊ. ಗೌರವ್ ಪ್ರಸಾದ್ (ಸಂಚಾಲಕರು, ICESST 2026), ಡಾ. ರಾಮ ನರಸಿಂಹ (ಮುಖ್ಯಸ್ಥರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ), ಪ್ರೊ. ಶ್ರೀನಾಥ್ ರಾವ್ ಕೆ. (ಮುಖ್ಯಸ್ಥರು, ಸಿವಿಲ್ ಇಂಜಿನಿಯರಿಂಗ್ ವಿಭಾಗ) ಉಪಸ್ಥಿತರಿದ್ದರು.

- Advertisement -

Latest News

error: Content is protected !!