Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ರೆಖ್ಯಾ ರಾ.ಹೆ. ಯಲ್ಲಿ ಲಾರಿ ದರೋಡೆ ಪ್ರಕರಣ:  ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ...

ಬೆಳ್ತಂಗಡಿ : ರೆಖ್ಯಾ ರಾ.ಹೆ. ಯಲ್ಲಿ ಲಾರಿ ದರೋಡೆ ಪ್ರಕರಣ:  ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ರಾ.ಹೆ‌.ಯಲ್ಲಿ 2017 ರಲ್ಲಿ ಲಾರಿ ತಡೆದು ನಡೆಸಿದ ದರೋಡೆ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ A-2 ವಾರಂಟ್ ಆರೋಪಿ ಬೆಂಗಳೂರು ಬನಶಂಕರಿ ನಿವಾಸಿ ಮಣಿ @ ಮಣಿಕಂಠ (32) ಬಂಧಿತ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಮಣಿ @ ಮಣಿಕಂಠ ತಲೆಮರೆಸಿಕೊಂಡಿದ್ದ . ಈತನನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್  ರವರುಗಳು ಬೆಂಗಳೂರಿನ ಬನಶಂಕರಿ ಮಾರ್ಕೆಟ್ ಬಳಿ ಎ.26 ರಂದು ಖಚಿತ ಮಾಹಿತಿ ಮೇರೆಗೆ ಬಂಧಿಸಿ ಎ.27 ರಂದು ಮಾನ್ಯ ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!